Home ಟಾಪ್ ಸುದ್ದಿಗಳು ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್’ಪ್ರೆಸ್ ರೈಲು

ಉತ್ತರ ಪ್ರದೇಶ: ಹಳಿ ತಪ್ಪಿದ ಸಬರಮತಿ ಎಕ್ಸ್’ಪ್ರೆಸ್ ರೈಲು

ಕಾನ್ಪುರ: ಇಂದು (ಆ.17) ಮುಂಜಾನೆ ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಸಬರಮತಿ ಎಕ್ಸ್ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ. ಆದರೆ ಘಟನೆಯಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.


ಇನ್ನು ಈ ಬಗ್ಗೆ ನಾರ್ತ್ ಸೆಂಟ್ರಲ್ ರೈಲ್ವೇ ಹಿರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿಕಾಂತ್ ತ್ರಿಪಾಠಿ ಮಾಹಿತಿ ನೀಡಿದ್ದಾರೆ. ಮುಂಜಾನೆ 2.30 ಕ್ಕೆ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದ್ದಾರೆ.

Join Whatsapp
Exit mobile version