ದೆಹಲಿಯಲ್ಲಿ ಸಚಿನ್ ಮತ್ತು ಸಿದ್ದರಾಮಯ್ಯ ಭೇಟಿ

Prasthutha|

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿ ವಿಮಾನದಲ್ಲಿ ಭೇಟಿಯಾಗಿದ್ದಾರೆ.ಭೇಟಿ ವೇಳೆ ಸಚಿನ್ ತೆಂಡೂಲ್ಕರ್ ಸಿದ್ದರಾಮಯ್ಯರ ಯೋಗಕ್ಷೇಮ ವಿಚಾರಿಸಿದ್ದಾರೆ. ದೆಹಲಿಯಿಂದ ಸಿಎಂ ಬೆಂಗಳೂರಿಗೆ ಹಿಂದಿರುಗುವಾಗ ಭೇಟಿ ನಡೆದಿದ್ದು,.ಈ ಭೇಟಿ ಸಂಪೂರ್ಣ ಆಕಸ್ಮಿಕ ಎಂದು ತಿಳಿದುಬಂದಿದೆ.

- Advertisement -

ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ. ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ.” ಎಂದು ಸಿಎಂ ‘Xನಲ್ಲಿ ಪೋಸ್ಟ್ ಹಾಕಿದ್ದಾರೆ.

Join Whatsapp