ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿ ಮಾಡಿದ ಸಚಿನ್ ಪೈಲಟ್

Prasthutha|

ದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಶುಕ್ರವಾರ ಭೇಟಿ ಮಾಡಿದ್ದಾರೆ.

- Advertisement -


ಕಾಂಗ್ರೆಸ್ ನಾಯಕರು ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಇತರರನ್ನು ಭೇಟಿಯಾದರು. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ 25 ನೇ ದಿನದಂದು ಈ ಕುಸ್ತಿಪಟುಗಳು ಜಂತರ್ ಮಂತರ್ ನಿಂದ ನವದೆಹಲಿಯ ಬಾಂಗ್ಲಾ ಸಾಹಿಬ್ ಗುರುದ್ವಾರದವರೆಗೆ ಮೆರವಣಿಗೆ ನಡೆಸಿದ್ದರು.

Join Whatsapp
Exit mobile version