ವಜಾಗೊಂಡಿರುವ ಮಾಜಿ IAS ಪೂಜಾ ಖೇಡ್ಕರ್ ತಂದೆ ಚುನಾವಣೆಗೆ ಸ್ಪರ್ಧೆ

Prasthutha|

ಮುಂಬೈ: ವಿವಾದಿತ ಮಾಜಿ ಐಎಎಸ್ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್ ಅವರ ತಂದೆ ದಿಲೀಪ್ ಖೇಡ್ಕರ್ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

- Advertisement -


ದಿಲೀಪ್ ಖೇಡ್ಕರ್ ಅವರು ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ಶೇವಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.


ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಕಾಶ್ ಅಂಬೇಡ್ಕರ್ ಅವರ ವಿಬಿಎ ಪಕ್ಷದಿಂದ ಅಹ್ಮದ್ನಗರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ 13 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಗಮನ ಸೆಳೆದಿದ್ದರು.

- Advertisement -


ದಿಲೀಪ್ ವಿಧಾನಸಭೆ ಚುನಾವಣೆಗೆ ಸಲ್ಲಿಸಿರುವ ಅಫಿಡಿವಿಟ್ ಕೂಡ ಚರ್ಚೆಗೆ ಗ್ರಾಸವಾಗಿದೆ. ದಿಲೀಪ್ ಅವರು ತಮ್ಮ ಪತ್ನಿ ಮನೋರಮಾ ಖೇಡ್ಕರ್ ಅವರಿಗೆ ವಿಚ್ಚೇದನ ನೀಡಿದ್ದಾರೆ ಎಂದು ಅಫಿಡಿವಿಟ್ನಲ್ಲಿ ತಿಳಿಸಿದ್ದಾರೆ.


ದಿಲೀಪ್ – ಮನೋರಮಾ ಖೇಡ್ಕರ್ ಪುತ್ರಿಯಾಗಿರುವ ಪೂಜಾ ಖೇಡ್ಕರ್ ಅವರು ಒಬಿಸಿ ಹಾಗೂ ಅಂಗವಿಕಲ ಕೋಟಾ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅವರನ್ನು ಕೆಲಸದಿಂದ ವಜಾ ಮಾಡಿ ಸೆಪ್ಟೆಂಬರ್ 7 ರಂದು ಆದೇಶ ಮಾಡಿತ್ತು.



Join Whatsapp