ಹೈಕಮಾಂಡ್ ಸೂಚನೆಯಂತೆ ಚುನಾವಣಾ ರಾಜಕೀಯದಿಂದ ಸದಾನಂದಗೌಡ ನಿವೃತ್ತಿ: ಯಡಿಯೂರಪ್ಪ

Prasthutha|

ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ಹಿರಿಯ ನಾಯಕ ಡಿ ವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ ರಾಜಕಾರಣದಲ್ಲಿ ಸಕ್ರಿಯರಾಗಿರಲಿದ್ದಾರೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

- Advertisement -


ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡುವ ಬಗ್ಗೆ ಸದಾನಂದಗೌಡರಿಗೆ ಕೇಂದ್ರ ಸೂಚನೆ ಕೊಟ್ಟಿದೆ. ಹಾಗಾಗಿ ಅವರು ಇನ್ಮುಂದೆ ಚುನಾವಣೆಗೆ ನಿಲ್ಲಲ್ಲ. ಆದರೆ ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿ ನೇರವಾಗಿ ಚುನಾವಣೆಗೆ ನಿಲ್ಲದಂತೆ ಸೂಚಿಸಿದೆ. ಅದನ್ನು ಸದಾನಂದಗೌಡ ಪಾಲನೆ ಮಾಡುತ್ತಿದ್ದಾರೆ ಎಂದರು.



Join Whatsapp