ಹಿರಿಯ ರಾಜಕಾರಣಿ ಸದಾನಂದ ಮಲ್ಲಿ ನಿಧನ

Prasthutha|

ಬಂಟ್ವಾಳ: ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸದಾನಂದ ಮಲ್ಲಿ ಬಂಟ್ವಾಳದ ಸ್ವಗೃಹದಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

- Advertisement -


ಬಂಟ್ವಾಳ ಪಟ್ಟಣ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ, ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಸಾಮಾಜಿಕ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಸಹಿತ ಹಲವು ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಅವರು ಜಿಲ್ಲಾ ಪಂಚಾಯಿತಿಗೆ ನೀರುಮಾರ್ಗ ಕ್ಷೇತ್ರದ ಸದಸ್ಯರಾಗಿದ್ದರು.


ಪತ್ನಿ ಸ್ವರ್ಣಲತಾ ಮಲ್ಲಿ, ಪುತ್ರ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ, ಪುತ್ರಿ ರಶ್ಮಿ ಹಾಗೂ ಅಪಾರ ಬಂಧುಬಳಗವನ್ನು ಅವರು ಅಗಲಿದ್ದಾರೆ. ಸದಾನಂದ ಅವರ ನಿಧನಕ್ಕೆ ರಮಾನಾಥ ರೈ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Join Whatsapp