Home ಟಾಪ್ ಸುದ್ದಿಗಳು ರಾಷ್ಟ್ರಧ್ವಜಕ್ಕೆ ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಿದ್ದಾರೆ: ಪರಮೇಶ್ವರ್

ರಾಷ್ಟ್ರಧ್ವಜಕ್ಕೆ ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಿದ್ದಾರೆ: ಪರಮೇಶ್ವರ್

ತುಮಕೂರು: ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ.


ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ ನೀಡಿರಲಿಲ್ಲ. ಹಾಗಾಗಿ ಪಂಚಾಯಿತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದಾರೆ ಎಂದು ಸಮರ್ಥಿಸಿಕೊಂಡರು.


ಇದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಬೇರೆ ಬೇರೆ ಕಡೆಯಲ್ಲಿ ಕೇಸರಿ ಧ್ವಜ ಹಾರಿಸಲು ಯಾರದ್ದು ತಕರಾರು ಇಲ್ಲ. ಆದರೆ ಸರ್ಕಾರಿ ಜಾಗದಲ್ಲಿ ಹಾರಿಸಬಾರದು. ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Join Whatsapp
Exit mobile version