ಜಾತ್ರೆಯ ಅಂಗಡಿಗಳಲ್ಲಿ ಕೇಸರಿ ಧ್ವಜ ಹಾಕಿರುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ: ದ.ಕ. ಉಸ್ತುವಾರಿ ಸಚಿವ ಗುಂಡೂರಾವ್

Prasthutha|

ಮಂಗಳೂರು: ಮಂಗಳಾದೇವಿ ದೇವಸ್ಥಾನದ ಜಾತ್ರೆಯ ಅಂಗಡಿಗಳಲ್ಲಿ ವ್ಯಾಪಾರ ಬಹಿಷ್ಕಾರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಪ್ರಕಾರ ದೇಶ ನಡೆಯಬೇಕು, ಯಾವುದೋ ಧರ್ಮದ ಪ್ರಕಾರ ಅಲ್ಲ. ಎಲ್ಲರಿಗೂ ಸಮಾನ ಹಕ್ಕುಗಳು ಈ ದೇಶದಲ್ಲಿ ಇರಬೇಕು. ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಮಾಡಲಿ, ಕಾನೂನು ಬಿಟ್ಟು ಏನನ್ನೂ ಮಾಡಬಾರದು. ಅವರು ಕರೆ ಕೊಡಲಿ, ಅವರ ಕರೆಯನ್ನು ಯಾರೂ ಒಪ್ಪಿಕೊಳ್ಳಬೇಕಿಲ್ಲ. ಆ ಕರೆಗಳಿಗೆ ಯಾವುದೇ ಕಾನೂನಿನ ಹಿನ್ನೆಲೆ ಇಲ್ಲ. ಅವರಿಗೆ ಈ ಥರ ವಿಚಾರ ಇಟ್ಟುಕೊಂಡು ಜನರಲ್ಲಿ ಗೊಂದಲ ಮೂಡಿಸಬೇಕು. ಅವರ ರಾಜಕಾರಣ ಇದರಲ್ಲೇ ಇರೋದು, ಧಾರ್ಮಿಕ ರಾಜಕಾರಣ ಬಿಜೆಪಿ ಮಾಡುತ್ತೆ. ನಾನು ಈ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡ್ತೇನೆ ಎಂದರು.