ಕೇಸರಿ ಧ್ವಜ ಮುಂದೊಂದು ದಿನ ರಾಷ್ಟ್ರ ಧ್ವಜವಾಗಲಿದೆ: ಕಲ್ಲಡ್ಕ ಭಟ್

Prasthutha|

ಮಂಗಳೂರು: ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ರಾಷ್ಟ್ರಧ್ವಜದ ಬಗ್ಗೆ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದು, ಹಿಂದೂಗಳು ಒಗ್ಗೂಡಿದರೆ ಭಗವಾ ಧ್ವಜ (ಕೇಸರಿ ಧ್ವಜ) ಒಂದಲ್ಲ ಒಂದು ದಿನ ರಾಷ್ಟ್ರಧ್ವಜವಾಗಬಹುದು ಎಂದು ಹೇಳಿದ್ದಾರೆ.

- Advertisement -

ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗದ ವತಿಯಿಂದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಸರಿ ಧ್ವಜ ರಾಷ್ಟ್ರಧ್ವಜ ಆಗಬಹುದು ಎಂಬುದಕ್ಕೆ ನಾನು ಸ್ಪಷ್ಟೀಕರಣ ಕೊಡುತ್ತೇನೆ. ಈ ಮೂರು ಬಣ್ಣದ ಧ್ವಜ ನಿರ್ಮಾಣ ಮಾಡುವ ಮೊದಲು ಬ್ರಿಟಿಷರ ಧ್ವಜ ಇತ್ತು, ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು ಎಂದು ಹೇಳಿದ್ದಾರೆ.

ಆಕಸ್ಮಾತ್ ರಾಜ್ಯಸಭೆ, ಲೋಕಸಭೆಯಲ್ಲಿ ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಎಂದು ಏನೂ ಇಲ್ಲ.ಅಲ್ಪಸಂಖ್ಯಾತ ಸಮುದಾಯವನ್ನು ಸಮಾಧಾನಪಡಿಸಲು  ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜ ಎಂದು ಮಾಡಲಾಗಿದೆ. ಹಾಗೆಯೇ ವಂದೇ ಮಾತರಂ ಅನ್ನು ತಿರಸ್ಕರಿಸಿ ಜಣಗಣಮನವನ್ನು ರಾಷ್ಟ್ರಗೀತೆಯನ್ನಾಗಿ ಅಂತಿಮಗೊಳಿಸಲಾಗಿದೆ ಎಂದು ಅವರು ಹೇಳಿದರು.



Join Whatsapp