ಬೆಳಗಾವಿ: ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದಕ್ಕೆ , ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದಿದೆ.
ಕಾಲೇಜಿಗೆ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಗಮಿಸುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕೂಡಲೇ ಕೇಸರಿ ಶಾಲು ತೆಗಸಿ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ್ದಾರೆ. ಜೊತೆಗೆ ಕಾಲೇಜಿಗೆ ಸಂಬಂಧ ಇಲ್ಲದ ಯುವಕರು ಬಂದು ಈ ರೀತಿ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು. ಮುಂದಿನ ಸಾರಿ ಕಾಲೇಜಿಗೆ ಬಾರದಂತೆ ಯುವಕರಿಗೆ ಪಿಎಸ್ ಐ ವಾರ್ನಿಂಗ್ ನೀಡಿದ್ದಾರೆ.
ಉಡುಪಿ, ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ನಡೆಯುತ್ತಿದ್ದ ಕೇಸರಿ ಶಾಲು ವಿವಾದ ದೂರದ ಬೆಳಗಾವಿಗೂ ವ್ಯಾಪಿಸಿದೆ.