Home ಟಾಪ್ ಸುದ್ದಿಗಳು ಸಾಗರ: ಕೆರೆಯಲ್ಲಿ SSLC ವಿದ್ಯಾರ್ಥಿನಿಯ ಶವ ಪತ್ತೆ

ಸಾಗರ: ಕೆರೆಯಲ್ಲಿ SSLC ವಿದ್ಯಾರ್ಥಿನಿಯ ಶವ ಪತ್ತೆ

ಶಿವಮೊಗ್ಗ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯ ಶವ ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ.

ಬೆಳಲಮಕ್ಕಿಯ ರಕ್ಷಿತ(16) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಬೆಳಗ್ಗೆ ಶಾಲೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಗಣಪತಿ ಕೆರೆಯಲ್ಲಿ ಶವ ಪತ್ತೆಯಾಗಿದ್ದು, ಸಾಗರ ಟೌನ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸಾಗರದ ಉಪವಿಭಾಗಿಯ ಆಸ್ಪತ್ರೆಗೆ ರವಾನಿಸಲಾಗಿದೆ.

Join Whatsapp
Exit mobile version