ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ | ಆದಿತ್ಯನಾಥ್ ಗೆ ಅಭಿನಂದನೆ ಸಲ್ಲಿಸಿದ ಸೈನಾ ನೆಹ್ವಾಲ್

Prasthutha: July 4, 2021

ಉತ್ತರ ಪ್ರದೇಶ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬೆಜೆಪಿ ಗೆಲುವು ಸಾಧಿಸಿದಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ 75 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಗೆದ್ದುಕೊಂಡಿತ್ತು.’ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಯೋಗಿ ಆದಿತ್ಯನಾಥ್ ರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ದಿಲ್ಲಿ ವಿಧಾನಸಭಾ ಚುನಾವಣೆಗೆ ಮೊದಲು ಕಳೆದ ವರ್ಷದ ಜನವರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿರುವ ಸೈನಾ ಟ್ವೀಟ್ ಮಾಡಿದ್ದಾರೆ.

ಸೈನಾ ಟ್ವೀಟ್ ಗೆ ವಿರೋಧ ಪಕ್ಷಗಳು ತೀಕ್ಷ್ಣವಾದ ಪ್ರತಿಕ್ರಿಯೆ ವ್ಯಕ್ತಪಡಿಸಿವೆ.
ರಾಷ್ಟ್ರೀಯ ಲೋಕದಳ ಅಧ್ಯಕ್ಷ ಜಯಂತ್ ಚೌಧರಿ ಅವರು ಸೈನಾರನ್ನು ”ಸರ್ಕಾರಿ ಶಟ್ಲರ್” ಎಂದು ಕರೆದಿದ್ದಾರೆ.ಜಾತ್ಯತೀತತೆಯು ನಿಮ್ಮ ಅಭಿಮಾನಿಗಳಲ್ಲಿ ವಿಭಜನೆ ಉಂಟು ಮಾಡಿದೆ. ನೀವು ಆಟವಾಡುವುದನ್ನು ಏಕೆ ನಿಲ್ಲಿಸುತ್ತೀರಿ? ಎಂದು ತಮಿಳುನಾಡು ಕಾಂಗ್ರೆಸ್ ನ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಡಾ.ಜೆ. ಅಸ್ಲಾಮ್ ಬಾಷಾ ಅವರು ಸೈನಾ ಅವರ ಟ್ವೀಟನ್ನು ಟ್ಯಾಗ್ ಮಾಡಿ ಟ್ವೀಟಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ