ಮಂಗಳೂರು : ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷೆ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು. ನೂತನ ಅಧ್ಯಕ್ಷೆಯಾಗಿ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿ ಪೌಸ್ತಿನ್ ಡಿಸೋಜಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸಬೀನ ಹಮೀದ್ ನಂದಾವರ ಆಯ್ಕೆಯಾಗಿದ್ದಾರೆ.
ಸಜೀಪ ಮುನ್ನೂರು ಗ್ರಾಮ ಪಂಚಾಯತ್ ನಲ್ಲಿ ಒಟ್ಟು 23 ಸ್ಥಾನಗಳಿದ್ದು, ಅದರಲ್ಲಿ 12ರಲ್ಲಿ ಎಸ್ ಡಿಪಿಐ ಬೆಂಬಲಿತರು ಮತ್ತು 11ರಲ್ಲಿ ಬಿಜೆಪಿ ಬೆಂಬಲಿತರು ವಿಜೇತರಾಗಿದ್ದರು. ಕಾಂಗ್ರೆಸ್ ಬೆಂಬಲಿತರು ಈ ಬಾರಿ ಇಲ್ಲಿ ಯಾವುದೇ ಸ್ಥಾನ ಗೆದ್ದಿಲ್ಲ.
ಅಧ್ಯಕ್ಷೆ ಸ್ಥಾನ ಹಿಂದುಳಿದ ವರ್ಗ ಬಿ ಸಮುದಾಯಕ್ಕೆ ಮೀಸಲಾಗಿತ್ತು. ಹಿಂದುಳಿದ ವರ್ಗ ಬಿ ಸಮುದಾಯದಿಂದ ಬಿಜೆಪಿ ಬೆಂಬಲಿತರಲ್ಲಿ ಯಾರೂ ಅಭ್ಯರ್ಥಿಗಳಿಲ್ಲದ ಕಾರಣ, ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿ ಪೌಸ್ತಿನ್ ಡಿಸೋಜಾ ಅವರಿಗೆ ಅಧ್ಯಕ್ಷೆ ಸ್ಥಾನಕ್ಕೇರುವುದು ಹಾದಿ ಸುಗಮವಾಗಿತ್ತು.
ಉಪಾಧ್ಯಕ್ಷೆ ಸ್ಥಾನಕ್ಕೆ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಸಬೀನ ಹಮೀದ್, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸುಮತಿ ನಾಮಪತ್ರ ಸಲ್ಲಿಸಿದ್ದರು.
ಕಳೆದ ಬಾರಿ ಈ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತರು ಆಡಳಿತ ನಡೆಸಿದ್ದರು. ಎಸ್ ಡಿಪಿಐ ಬೆಂಬಲಿತರು ಮೂರು ಸ್ಥಾನಗಳಲ್ಲಿ ಗೆದ್ದಿದ್ದು, ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರು.