November 24, 2020

ಸಜಿಪ ಮುನ್ನೂರು | ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಒತ್ತಾಯಿಸಿ SDPI ಮನವಿ

ನಂದಾವರ : ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸಜಿಪ ಮುನ್ನೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಎಸ್ ಡಿಪಿಐ ಮುಖಂಡರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

ನಂದಾವರ ಗ್ರಾಮಸ್ಥರ ಬಹುಕಾಲದ ಬೇಡಿಕೆಗಳಲ್ಲಿ ಒಂದಾದ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಮಾಡಿಕೊಡಬೇಕೆಂದು ಸರ್ವ ಗ್ರಾಮಸ್ಥರ ಪರವಾಗಿ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸ್ವೀಕರಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಗುಂಡಪ್ಪ ಬಿರುದಾರ ಅವರು, ಸೂಕ್ತ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಭರವಸೆ ನೀಡಿದರು. SDPI ಮುಖಂಡರುಗಳಾದ ಶಕೀರ್ ನಂದಾವರ, ಜಮಾಲ್ ರಾಯಲ್, ಶಾಫಿ ನಂದಾವರ, ಅಶ್ರಫ್ ನಂದಾವರ ಹಾಗೂ ಅಫ್ರಿದ್ ನಂದಾವರ ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.

ಟಾಪ್ ಸುದ್ದಿಗಳು

ವಿಶೇಷ ವರದಿ