ಸಕಾಲ ಸೇವೆ ಅನುಷ್ಠಾನ| ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜ್ಯಕ್ಕೆ ಪ್ರಥಮ

Prasthutha|

 ಬೆಂಗಳೂರು: ಇಂದು ನಾಳೆ ಇನ್ನಿಲ್ಲ, ಹೇಳಿದ ಸಮಯ ತಪ್ಪೊಲ್ಲ ಎಂಬ ಧ್ಯೇಯವಾಕ್ಯದೊಂದಿಗೆ ಸರ್ಕಾರದ ವಿವಿಧ ಯೋಜನೆಗಳು, ದಾಖಲೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರೈಸುವ ಸಕಾಲ ಮಿಷನ್ ಅನುಷ್ಠಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು 2022 ರ ಡಿಸೆಂಬರ್ ತಿಂಗಳಲ್ಲಿ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದೆ.

- Advertisement -

ಜಿಲ್ಲಾಡಳಿತದ ಈ ಸ್ಪಂದನಶೀಲತೆ ಹಾಗೂ ಸಾಧನೆಗೆ ಆರೋಗ್ಯ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಕಳೆದ ಡಿಸೆಂಬರ್ ತಿಂಗಳಲ್ಲಿ 69,737 ಅರ್ಜಿಗಳು ಸಕಾಲ ಅಡಿ ಸ್ವೀಕೃತಿಯಾಗಿದ್ದವು. 66,170 ಅರ್ಜಿಗಳು ವಿಲೇವಾರಿಯಾಗಿವೆ. 3,217 ಅರ್ಜಿಗಳು ತಿರಸ್ಕೃತಗೊಂಡಿವೆ. 93 ಅರ್ಜಿಗಳು ಮಾತ್ರ ಬಾಕಿ ಇವೆ. ರಾಜ್ಯದಲ್ಲಿಯೇ ಅತಿ ಕಡಿಮೆ ಅರ್ಜಿಗಳು ಬಾಕಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ.20ಕ್ಕೆ, ಶೇ.19.9 ಅಂಕಗಳನ್ನು (ವೇಟೇಜ್) ಪಡೆದು ಈ ಸಾಧನೆ ಮಾಡಿದೆ. ಇದಕ್ಕಾಗಿ ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಓ ಕೆ.ರೇವಣಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಈ ಪ್ರಯತ್ನವನ್ನು ಸಚಿವರು ಶ್ಲಾಘಿಸಿದ್ದಾರೆ.

- Advertisement -

 ಸಚಿವರ ಸ್ವಕ್ಷೇತ್ರ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯು  2ನೇ ಸ್ಥಾನ ಪಡೆದಿರುವದನ್ನೂ ಸಚಿವರು ಪ್ರಶಂಸಿಸಿದ್ದಾರೆ.

Join Whatsapp