ಸಕಲೇಶಪುರ : ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

Prasthutha|

ಹಾಸನ: ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿಯಲ್ಲಿ ನಡೆದಿದೆ.

- Advertisement -

ಸದ್ಯ ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲೇ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್ ನಲ್ಲೇ ತಯಾರಾದ ಆಹಾರ ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥತೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿದ್ದು, ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ.

Join Whatsapp
Exit mobile version