ಸಕಲೇಶಪುರ: ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ದಾಳಿಗೆ ಬಲಿ

Prasthutha|

ಹಾಸನ: ಈ ಹಿಂದೆ ಹಲವು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಮೃತಪಟ್ಟ ಘಟನೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ನಡೆದಿದೆ.

- Advertisement -

ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು ಹಾಗೂ ಕಾಡಾನೆ ಮಧ್ಯೆ ಕಾಳಗ ನಡೆದಿದೆ. ಇದೇ ವೇಳೆ ಇತರ ಸಾಕಾನೆಗಳು ಓಡಿಹೋದರೆ, ಅರ್ಜುನ ಮಾತ್ರ ಒಂಟಿಸಲಗದ ಜತೆ ಸೆಣಸಾಡಿತ್ತು. ನಾಲ್ಕು ಸಾಕಾನೆಗಳೊಂದಿಗೆ ಸೋಮವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದೆ.



Join Whatsapp