Home ಟಾಪ್ ಸುದ್ದಿಗಳು ಸಕಲೇಶಪುರ: ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

ಸಕಲೇಶಪುರ: ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

ಹಾಸನ: ಇತ್ತೀಚಿಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ.

ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಆಗಾಗ ನಡೆಯುತ್ತಿದ್ದ ಜಗಳಕ್ಕೆ ಕಡಿವಾಣ ಹಾಕಿ ಪ್ರಕೃತಿಯನ್ನು ರಕ್ಷಿಸಲು ಇಲಾಖೆ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಪಟ್ಲ ಬೆಟ್ಟ ಸಕಲೇಶಪುರ ಪಟ್ಟಣದಿಂದ 40 ಕಿಮೀ ದೂರದಲ್ಲಿದೆ.

ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಪ್ರವಾಸಿಗರ ಹಿತದೃಷ್ಟಿಯಿಂದ ಮಾರ್ಗಸೂಚಿಗಳನ್ನು ರೂಪಿಸಲು ಚಿಂತನೆ ನಡೆಸಲಾಗುತ್ತಿದೆ. ಭವಿಷ್ಯದಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಆನ್‌ಲೈನ್ ಬುಕಿಂಗ್ ವ್ಯವಸ್ಥೆ ಪರಿಚಯಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

Join Whatsapp
Exit mobile version