Home ಟಾಪ್ ಸುದ್ದಿಗಳು ಸಕಲೇಶಪುರ | ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಸಕಲೇಶಪುರ | ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಹಾಸನ: ಟಿಪ್ಪರ್ ವಾಹನ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ.


ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು. ಸದ್ಯ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ವೇಳೆ ಹಾಸನ ಕಡೆಯಿಂದ ಆಗಮಿಸುತ್ತಿದ್ದ ಟಿಪ್ಪರ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version