ಸಕಲೇಶಪುರದಲ್ಲಿ ಮುಂದುವರೆದ ಕಾಡಾನೆ ಹಾವಳಿ: ಮತ್ತೊಂದು ಬಲಿ

Prasthutha|

ಸಕಲೇಶಪುರ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ತಾಲೂಕಿನ ಕುನಿಗನಹಳ್ಳಿಯ ವಡೂರು ಗ್ರಾಮದಲ್ಲಿ ನಡೆದಿದೆ.

- Advertisement -


ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕವಿತಾ (37) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.


ಕಾಡಾನೆ ಮಹಿಳೆಯ ಸೊಂಟದ ಭಾಗಕ್ಕೆ ಬಲವಾಗಿ ತುಳಿದಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆ ಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ ಪಟ್ಟಿದ್ದಾರೆನ್ನಲಾಗಿದೆ.

- Advertisement -

ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಮಲೆನಾಡು ಭಾಗಗಳಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಅರಣ್ಯ ಇಲಾಖೆಯವರು ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರು, ಕಾಡಾನೆ ದಾಳಿಗೆ ಬ್ರೇಕ್ ಹಾಕಲಾಗುತ್ತಿಲ್ಲ. ಆಗಸ್ಟ್ 14 ರಂದು ಹಾಸನ ಜಿಲ್ಲೆಯಲ್ಲಿ ಬೈಕ್ ಸವಾರನ ಮೇಲೆ ಒಂಟಿ ಸಲಗ ದಾಳಿ ಮಾಡಿತ್ತು. ರಾತ್ರಿ ಸಕಲೇಶಪುರ ತಾಲ್ಲೂಕಿನ, ಕಿರೇಹಳ್ಳಿ ಗ್ರಾಮದ ಬಳಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಚೇತನ್ ಎಂಬಾತನ ಮೇಲೆ ಕಾಡಾನೆ ದಾಳಿ ಮಾಡಿ,ಬೈಕ್ನ್ನು ಪುಡಿ ಪುಡಿ ಮಾಡಿತ್ತು. ಅದೃಷ್ಟವಶಾತ್ ಸವಾರ ಚೇತನ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದ.

Join Whatsapp