ಸಕಲೇಶಪುರ: ಲಾರಿ ಅಡ್ಡಗಟ್ಟಿ ಚಾಲಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
- Advertisement -
ಈ ಘಟನೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಬಂದ ಸಂಘಪರಿವಾರದ ಕಾರ್ಯಕರ್ತರು ಪ್ಲೈವುಡ್ ತುಂಬಿದ್ದ ಲಾರಿಯನ್ನು ಅಡ್ಡಗಟ್ಟಿ ಚಾಲಕ, ನೆಲ್ಯಾಡಿ ಗ್ರಾಮದ ನಿವಾಸಿ ಮುಹಮ್ಮದ್ ನಿಶಾನ್ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಲಾಗಿದೆ.
- Advertisement -
ಘಟನೆಯ ಬಗ್ಗೆ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.