ಕೊಲ್ಲೂರು ದೇಗುಲದಲ್ಲಿ ಟಿಪ್ಪು ನೆನಪಿಗಾಗಿ ನಡೆಯುತ್ತಿರುವ ಮಂಗಳಾರತಿಯ ಹೆಸರು ಬದಲಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹ

Prasthutha|

ಉಡುಪಿ: ಕೊಲ್ಲೂರು ಮೂಕಾಂಬಿಕ ದೇಗುಲದಲ್ಲಿ ನಡೆಯುವ ಸಲಾಂ ಮಂಗಳಾರತಿ ಹೆಸರು ಬದಲಿಸುಂತೆ ದೇಗುಲದ ಅಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್‌ ಮನವಿ ಮಾಡಿದೆ.

- Advertisement -

ಟಿಪ್ಪು ಸುಲ್ತಾನ್ ನೆನಪಿಗಾಗಿ ನಡೆಯುವ ಸಲಾಂ ಮಂಗಳಾರತಿ ಎಂಬ ಹೆಸರನ್ನು ತೆಗೆಯಬೇಕು. ಟಿಪ್ಪು ಸಾವಿರಾರು ಹಿಂದೂಗಳ ನರಮೇಧ ನಡೆಸಿದ್ದಾನೆ. ಟಿಪ್ಪು ನೂರಾರು ದೇವಸ್ಥಾನಗಳು ಧ್ವಂಸ ಮಾಡಿದ್ದಾರೆ. ಅವರ ಹೆಸರಿನಲ್ಲಿ ಮಂಗಳಾರತಿ ನಡೆಸುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆಯಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.

ಸಲಾಂ ಹೆಸರನ್ನು ತೆಗೆದು ದೇವರ ಹೆಸರಲ್ಲಿ ಆರತಿ ಮಾಡಿ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಕಾರ್ಯನಿರ್ವಹಣಾಧಿಕಾರಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಗೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.



Join Whatsapp