ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ಎಂ.ಸಿ. ಸುಧಾಕರ್

Prasthutha|

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.

- Advertisement -

ಈ ಬಗ್ಗೆ ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆ ಸಂಬಂಧ ಮಾತನಾಡಿದ ಸುಧಾಕರ್, ನಾವು ಅವರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಖಾಯಂ ಅವರ ಪ್ರಮುಖ ಬೇಡಿಕೆ ಆಗಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

Join Whatsapp