Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ಹೆಚ್ಚಳ: ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ಹೆಚ್ಚಳ: ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್ 1, 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.


ರಾಜ್ಯ ಸರ್ಕಾರಿ ನೌಕರರು ಮುಷ್ಕರ ಹೂಡಿರುವುದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಇಂದು ಬೆಳಗ್ಗೆ ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.


ನೌಕರರ ಸಂಘಕ್ಕೆ ಈ ಆದೇಶ ಪ್ರತಿಯನ್ನು ರವಾನಿಸಲಾಗಿದೆ. ಮುಷ್ಕರನಿರತ ನೌಕರರು ಇದುವರೆಗೆ ತಮ್ಮ ನಿರ್ಧಾರವನ್ನು ಪ್ರಕಟಿಸಿಲ್ಲ. ರಾಜ್ಯಾದ್ಯಂತ ನೌಕರರು ಮುಷ್ಕರದಲ್ಲಿ ತೊಡಗಿರುವುದರಿಂದ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.

Join Whatsapp
Exit mobile version