Home ಟಾಪ್ ಸುದ್ದಿಗಳು ಆಹಾರ ಪದಾರ್ಥಗಳ ಮೇಲೆ ಬ್ಯಾಚ್ ಸಂಖ್ಯೆ, ಸಸ್ಯಾಹಾರ, ಮಾಂಸಾಹಾರ ಚಿಹ್ನೆ ನಮೂದಿಸದೆ ಮಾರಾಟ ಅಪರಾಧ: ಹೈಕೋರ್ಟ್

ಆಹಾರ ಪದಾರ್ಥಗಳ ಮೇಲೆ ಬ್ಯಾಚ್ ಸಂಖ್ಯೆ, ಸಸ್ಯಾಹಾರ, ಮಾಂಸಾಹಾರ ಚಿಹ್ನೆ ನಮೂದಿಸದೆ ಮಾರಾಟ ಅಪರಾಧ: ಹೈಕೋರ್ಟ್

ಬೆಂಗಳೂರು: ಆಹಾರ ಪದಾರ್ಥಗಳ ಮೇಲೆ ಬ್ಯಾಚ್ ಸಂಖ್ಯೆ, ಎಕ್ಸ್ಪೈರಿ ದಿನಾಂಕ ಅಥವಾ ಸಸ್ಯಾಹಾರ, ಮಾಂಸಾಹಾರ ಚಿಹ್ನೆ ನಮೂದಿಸದೆ ಮಾರಾಟ ಮಾಡುವುದು ಆಹಾರ ಕಲಬೆರಕೆ ತಡೆ ಕಾಯಿದೆ ಅಡಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಕಲಬೆರಕೆ ಕಾಫಿ ಪುಡಿ ಮಾರಾಟ ಮಾಡಿದ ಪ್ರಕರಣದಲ್ಲಿ ಆರೋಪಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಎತ್ತಿ ಹಿಡಿದ ನ್ಯಾಯಮೂರ್ತಿ ಡಾ.ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಪೊಟ್ಟಣದ ಮೇಲೆ ಬ್ಯಾಚ್ ಸಂಖ್ಯೆ ಹಾಗೂ ಎಕ್ಸ್ಪೈರಿ ದಿನಾಂಕ ನಮೂದಿಸದೆ ಕಾಫಿ ಪುಡಿ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದತಿ ಕೋರಿ ಸಕಲೇಶಪುರದ ಸೆಲೆಕ್ಟ್ ಕಾಫಿ ವರ್ಕ್ಸ್ನ ಮಾಲೀಕ ಸಯ್ಯದ್ ಅಹ್ಮದ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಪೀಠವು ವಜಾ ಮಾಡಿದೆ.

ಮಾರಾಟ ಮಾಡಿದ ಆಹಾರ ಪದಾರ್ಥವನ್ನು ಕಾಯ್ದೆಯ ಅವಶ್ಯಕತೆಗೆ ಅನುಗುಣವಾಗಿ ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳಿಗೆ ಅನುಗುಣವಾಗಿ ಲೇಬಲ್ ಮಾಡಲಾಗಿಲ್ಲ, ಅದರ ಬ್ಯಾಚ್ ಸಂಖ್ಯೆಯನ್ನು ಉಲ್ಲೇಖಿಸುವ ಮೂಲಕ, ‘ಬೆಸ್ಟ್ ಬಿಫೋರ್’ ಮತ್ತು ‘ವೆಜ್’ ಅಥವಾ ‘ನಾನ್-ವೆಜ್’ ಸಂಕೇತವನ್ನು ಉಲ್ಲೇಖಿಸುವ ಮೂಲಕ, ಇದು ಕಾಯ್ದೆಯ ಸೆಕ್ಷನ್ 16 (1) (ಎ) ಅಡಿಯಲ್ಲಿ ಸೆಕ್ಷನ್ 7 (1) ಮತ್ತು 7 (2) ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದೆ.

ಅಲ್ಲದೆ ಅರ್ಜಿದಾರನಿಗೆ ಆರು ತಿಂಗಳು ಶಿಕ್ಷೆ ಹಾಗೂ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ನೀಡಿದ್ದ ಆದೇಶ ಎತ್ತಿಹಿಡಿದಿರುವ ಹೈಕೋರ್ಟ್, ಅರ್ಜಿದಾರರು 45 ದಿನಗಳಲ್ಲಿ ಸಕಲೇಶಪುರದ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಶರಣಾಗಿ, ಶಿಕ್ಷೆ ಅನುಭವಿಸಬೇಕು ಎಂದಿದೆ.

ಪೊಟ್ಟಣದ ಮೇಲೆ ಬ್ಯಾಚ್ ಸಂಖ್ಯೆ ಹಾಗೂ ಎಕ್ಸ್ಪೈರಿ ದಿನಾಂಕ ನಮೂದಿಸದೆ ಕಾಫಿ ಪುಡಿ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ವಿಚಾರಣಾಧೀನ ನ್ಯಾಯಾಲಯವು ಸಯ್ಯದ್ ಅಹ್ಮದ್ಗೆ ಶಿಕ್ಷೆ ವಿಧಿಸಿತ್ತು.  ಶಿಕ್ಷೆ ರದ್ದತಿ ಕೋರಿ ಸಯ್ಯದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

(ಕೃಪೆ: ಬಾರ್ & ಬೆಂಚ್)

Join Whatsapp
Exit mobile version