ಉಳ್ಳಾಲ: ನಿಷೇಧಿತ ಮಾದಕ ವಸ್ತು ಮಾರಾಟ; ಇಬ್ಬರ ಬಂಧನ

Prasthutha|

ಉಳ್ಳಾಲ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಪಿಎಸ್‌ಐ ಧನರಾಜ್‌ ನೇತೃತ್ವದಲ್ಲಿ ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಗಳನ್ನು ತ್ರಿಶ್ಶೂರ್‌ನ ವಡಕಂಚೇರಿ ಗ್ರಾಮದ ಶೇಕ್‌ ತನ್ವೀರ್‌ (20) ಮತ್ತು ಕೋಯಿಕ್ಕೋಡ್‌ ಅಂಜೇರಿ ವಡಗೆರೆ ನಿವಾಸಿ ಸಾಯಿಕೃಷ್ಣ (19) ಎಂದು ಗುರುತಿಸಲಾಗಿದೆ.

ತಲಪಾಡಿ ತಚ್ಚಾಣಿ ಬಳಿ ಬಂಧಿಸಿದ್ದು, ಆರೋಪಿಗಳಿಂದ ಎಂಡಿಎಂಎ ಹಾಗೂ ಸಾಗಾಟಕ್ಕೆ ಬಳಸಿದ್ದ ಬೈಕ್‌ ಮತ್ತು ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

- Advertisement -

ಉಳ್ಳಾಲ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.