►ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಅಪ್ಸರ್ ಕೊಡ್ಲಿಪೇಟೆ ಆಗ್ರಹ
ಹುಬ್ಬಳ್ಳಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಧಾರವಾಡ ಜಿಲ್ಲೆಯ 2024-27 ರ ಅವಧಿಗೆ ನೂತನ ಅಧ್ಯಕ್ಷರಾಗಿ ಸಲೀಂ ಅರಳಿಕಟ್ಟಿ ಉಪಾಧ್ಯಕ್ಷರಾಗಿ ಗಫೂರಅಹ್ಮದಕುರಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಅಮನ ಖಾನ ಶಿವಳ್ಳಿ ಕಾರ್ಯದರ್ಶಿಗಳಾಗಿ ಜಹೀರ್ ಜಮಖಂಡಿ, ಕೋಶಾಧಿಕಾರಿಯಾಗಿ ಅಬ್ದುಲ್ ಜಬ್ಬಾರ್ ಹಾಗೂ ಸಮಿತಿ ಸದಸ್ಯರುಗಳಾಗಿ ತರನ್ನು ಸವಣೂರ, ಇಸ್ಮಾಯಿಲ್ ನಲ್ಬಂದ್, ಮುಜಾಹಿದ್ ಶಿವಳ್ಳಿ, ರಫೀಕ್ ಲಷ್ಕರ್, ಜೀಲಾನಿ ಅರಳಿಕಟ್ಟಿ ರವರು ಆಯ್ಕೆಯಾಗಿದ್ದಾರೆ.
ಧಾರವಾಡ ಜಿಲ್ಲಾ ಸಮಿತಿಯ ಚುನಾವಣಾ ಪ್ರಕ್ರಿಯೆಯನ್ನು, ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೆ ಆರ್ ನಗರ ರವರು ನಡೆಸಿಕೊಟ್ಟರು.
ಜಿಲ್ಲಾ ಪ್ರತಿನಿಧಿ ಸಭೆಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆಫ್ಸರ್ ಕೊಡ್ಲಿಪೇಟೆ ರವರು ಉದ್ಘಾಟಿಸಿ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ ನೆನೆಗುದಿಗೆ ಬಿದ್ದಿರುವ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.
ವಾಣಿಜ್ಯ ನಗರಿ ಹುಬ್ಬಳ್ಳಿ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಹೀಗಾಗಿ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಸುಸಜ್ಜಿತವಾದ ವಾಹನ ನಿಲುಗಡೆಗೆ ಆನುಕೂಲವಾಗುವ ನಿಟ್ಟಿನಲ್ಲಿ ಮಲ್ಟಿ ಲೆವಲ್ ಕಾರು ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಯೋಜನೆ ರೂಪಿಸಿತ್ತು. ಆದರೆ, ದಶಕಗಳು ಕಳೆದರೂ ಈ ಯೋಜನೆ ಸಫಲವಾಗಿಲ್ಲ.
ಮಾರ್ಚ್ 2020 ರಲ್ಲಿ ಪ್ರಾರಂಭವಾದ ಮಲ್ಟಿ – ಲೆವೆಲ್ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಪೂರ್ಣಗೊಳ್ಳುವ ಲಕ್ಷಣಗಳು ಮಾತ್ರ ಇನ್ನೂ ಕಾಣುತ್ತಿಲ್ಲ. ಕಳೆದ 5 ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದರೂ ಕಟ್ಟಡ ನೆಲಬಿಟ್ಟು ಎದ್ದಿಲ್ಲ ಎಂದು ಆರೋಪಿಸಿದರು.
ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಲಿಮಿಟೆಡ್ (ಎಚ್‌ಡಿಎಸ್‌ಸಿಎಲ್) ಸಾರ್ವಜನಿಕ – ಖಾಸಗಿ ಸಹಭಾಗಿತ್ವ (ಪಿಪಿಪಿ) ಮೋಡ್‌ನಲ್ಲಿ 50 ಕೋಟಿ ವೆಚ್ಚದಲ್ಲಿ (ಎಚ್‌ಡಿಎಸ್‌ಸಿಎಲ್‌ನ 10 ಕೋಟಿ ಷೇರುಗಳನ್ನು ಒಳಗೊಂಡಿದೆ) ನಿರ್ಮಾಣವಾಗುತ್ತಿರುವ ಬಹುಮಹಡಿ ಕಾರು ಪಾರ್ಕಿಂಗ್ ಯೋಜನೆಯಾಗಿದೆ.
ಜಿಲ್ಲಾ ಪ್ರತಿನಿಧಿ ಸಭೆಯಲ್ಲಿ ಪಕ್ಷದ ಕಳೆದ ಒಂದುವರೆ ವರ್ಷಗಳ ಕಾರ್ಯ ಚಟುವಟಿಕೆಗಳ ವರದಿಯನ್ನು ಮಂಡಿಸಿ ಅಗತ್ಯ ಸಲಹೆಗಳನ್ನು ಪರಿಗಣಿಸಿ ಅನುಮೋದನೆ ನೀಡಲಾಯಿತು. ಧಾರವಾಡ ಜಿಲ್ಲೆಯ ರಾಜಕೀಯ ವಿದ್ಯಮಾನಗಳ ಚರ್ಚೆ ನಡೆಸಿ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಿಷ್ಠಗೊಳಿಸಲು ಚರ್ಚೆ ನಡೆಸಲಾಯಿತು.