ಮೈಸೂರು: ಬಿಜೆಪಿ ಅಥವಾ ಜೆಡಿಎಸ್ ನಿಂದ ಸಲೀಂ ಸುಪಾರಿ ಪಡೆದು ಕಾಂಗ್ರೆಸ್ ಪಕ್ಷದ ನಾಗಾಲೋಟಕ್ಕೆ ಬ್ರೇಕ್ ಹಾಕಲು ಮತ್ತು ಇದನ್ನು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಲು ಹುನ್ನಾರ ನಡೆಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಲೀಂ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಅವರ ನಡುವೆ ನಡೆದಿರುವ ಸಂಭಾಷಣೆ ವೇಳೆ ತಮ್ಮ ವಿರುದ್ಧ ಕೇಳಿಬಂದ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪಕ್ಷವು ತನ್ನ ನಿಯಮಗಳಂತೆ ಶಿಸ್ತುಕ್ರಮ ಜರುಗಿಸಲಿದೆ. ಮಾಧ್ಯಮಗಳಲ್ಲಿ ಬಂದಿರುವ ವರದಿ ನನಗೂ-ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಯಲಿದೆ ಎಂದು ಲಕ್ಷ್ಮಣ್ ಹೇಳಿದ್ದಾರೆ.