Home ಟಾಪ್ ಸುದ್ದಿಗಳು ನಟ ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ: ಮತ್ತೊಬ್ಬ ಅರೆಸ್ಟ್

ನಟ ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ: ಮತ್ತೊಬ್ಬ ಅರೆಸ್ಟ್

ಮುಂಬೈ: ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಮತ್ತೊಬ್ಬ ಸದಸ್ಯನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.


ಹರಿಯಾಣದ ಫತೇಹಾಬಾದ್ ನಿವಾಸಿ ಹರ್ಪಾಲ್ ಸಿಂಗ್ (34) ಬಂಧಿತ ಆರೋಪಿ. ಸೋಮವಾರ ಸಂಜೆ ಮುಂಬೈ ಅಪರಾಧ ವಿಭಾಗದ ತಂಡ ಆತನ ಸ್ವಗ್ರಾಮದಿಂದ ಬಂಧಿಸಿ ಮುಂಬೈಗೆ ಕರೆತಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಪ್ರಿಲ್ 14ರ (ಭಾನುವಾರ) ಮುಂಜಾನೆ 5 ಗಂಟೆ ವೇಳೆಗೆ ಎರಡು ಬೈಕ್ ಗಳಲ್ಲಿ ಬಂದ ಇಬ್ಬರು ಆರೋಪಿಗಳು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು.

Join Whatsapp
Exit mobile version