ನ್ಯೂಯಾರ್ಕ್: ಅಪರಿಚಿತರಿಂದ ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರು ವೆಂಟಿಲೇಟರ್’ನಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ.
ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೈಯ ನರ, ಲಿವರ್ ಮತ್ತು ಕಣ್ಣಿಗೆ ತೀವ್ರ ಹಾನಿಯಾಗಿದೆ. ಇದರಿಂದ ಅವರು ತನ್ನ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಚೂರಿ ಇರಿತಕ್ಕೊಳಗಾಗಿ ಗಂಭೀರ ಅವಸ್ಥೆಯಲ್ಲಿರುವ ಮುಂಬೈ ಮೂಲದ ರಶ್ದಿ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಮಾತನಾಡುವ ಸ್ಥಿತಿಯಲ್ಲಿಲ್ಲ ಎಂದು ರಶ್ದಿ ಪರ ಏಜೆಂಟ್ ಆಂಡ್ರ್ಯೂ ವೈಲಿ ತಿಳಿಸಿದ್ದಾರೆ.
ನ್ಯೂಯಾರ್ಕ್’ನ ಚೌಟಕ್ವಾ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಶ್ದಿ ಅವರ ಕುತ್ತಿಗೆಗೆ ಚಾಕುವಿನಿಂದ ಇರಿಯಲಾಗಿತ್ತು. ನ್ಯೂಜೆರ್ಸಿಯಲ್ಲಿರುವ ಫೇರ್‌ವ್ಯೂನ ಹದಿ ಮತರ್ ಎಂಬವನು ರಶ್ದಿ ಅವರಿಗೆ ಮಾರಕಾಯುಧದಿಂದ ದಾಳಿ ನಡೆಸಿದ್ದ ಎಂದು ತಿಳಿದು ಬಂದಿದೆ.