ಮಂಗಳೂರಿನಲ್ಲಿ ಸಲೂನ್ ಮೇಲೆ ದಾಳಿ: ಮಾಲೀಕ ಸುಧೀರ್ ಹೇಳಿದ್ದೇನು?

Prasthutha|

ಮಂಗಳೂರು: ಅನೈತಿಕ ಚಟುವಟಿಕೆ ಆರೋಪಿಸಿ ಸಲೂನ್ ಮೇಲೆ ರಾಮಸೇನೆ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ಬಿಜೈ ಕೆಎಸ್ಆರ್ ಟಿಸಿ ಬಳಿ ನಡೆದಿದೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಲೂನ್ ಮಾಲೀಕ ಸುಧೀರ್, ದಾಳಿ ಮಾಡಿದವರೇ ಕೆಲವು ವಸ್ತುಗಳನ್ನು ತಂದು ಬಿಸಾಡಿದ್ದಾರೆ. ವಾರಕ್ಕೊಮ್ಮೆ ಅಧಿಕಾರಿಗಳು ನಮ್ಮ ಸಲೂನ್ ಪರಿಶೀಲಿಸುತ್ತಿದ್ದಾರೆ. ಕಾನೂನು ಪ್ರಕಾರ ಅನುಮತಿ ಪಡೆದು ಕಳೆದ 2 ವರ್ಷದಿಂದ ನಾವು ಸಲೂನ್ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.


ಸುಮಾರು 12 ಜನರ ತಂಡ ಇಂದು ಏಕಾಏಕಿ ದಾಳಿ ನಡೆಸಿ ಎಲ್ಲಾ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಈ ರೀತಿ ದಾಳಿ ಮಾಡಿದರೆ ನಾವು ವ್ಯವಹಾರ ನಡೆಸುವುದು ಹೇಗೆ. ದಾಳಿ ನಡೆಸಿದವರ ಪೈಕಿ ನಮಗೆ ಯಾರೂ ಗೊತ್ತಿಲ್ಲ, ಶತ್ರುಗಳಲ್ಲ. ಘಟನೆ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದೇನೆ ಎಂದು ತಿಳಿಸಿದ್ದಾರೆ.



Join Whatsapp