Home ಕರಾವಳಿ ಮಂಗಳೂರಿನಲ್ಲಿ ಸಲೂನ್ ಮೇಲೆ ದಾಳಿ | ದೇವರ ಹೆಸರು ಹೇಳಿಕೊಂಡು ಗೂಂಡಾಗಿರಿ ಮಾಡೋದು ರಾಮನಿಗೆ ಕಳಂಕ:...

ಮಂಗಳೂರಿನಲ್ಲಿ ಸಲೂನ್ ಮೇಲೆ ದಾಳಿ | ದೇವರ ಹೆಸರು ಹೇಳಿಕೊಂಡು ಗೂಂಡಾಗಿರಿ ಮಾಡೋದು ರಾಮನಿಗೆ ಕಳಂಕ: ಸಚಿವ ಗುಂಡೂರಾವ್

►‘ಇಂತಹ ಕೃತ್ಯ ಮಂಗಳೂರಿನ ಅಭಿವೃದ್ಧಿಗೆ ಹಿನ್ನೆಡೆಯಾಗಲಿದೆ’

ರಾಮನಗರ: ರಾಮ ಸೇನೆ ಕಾರ್ಯಕರ್ತರು ಮಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಲೂನ್ ಮೇಲೆ ದಾಳಿ ಮಾಡಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಖಂಡಿಸಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ದಿನೇಶ್ ಗುಂಡೂರಾವ್ ಮಾತನಾಡಿ, ‘ರಾಮ ಸೇನೆ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಕೆಲಸ ಆಗುತ್ತಿದೆ. ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ ಮಾಡಬೇಡಿ. ಯಾರಿಗೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಇಲ್ಲ. ಶ್ರೀರಾಮ ಸೇನೆ ಹೆಸರಿನಲ್ಲಿ ದಾಂದಲೆ ಮಾಡುವುದು ಸರಿಯಲ್ಲ’ ಎಂದಿದ್ದಾರೆ.


‘ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಏನಾದರು ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಕಂಡು ಬಂದರೆ ಕೂಡಲೇ ಪೊಲೀಸರ ಗಮನಕ್ಕೆ ತಂದು ದೂರು ನೀಡಬೇಕು. ಬದಲಾಗಿ ಇವರೇ ( ರಾಮ ಸೇನೆ ಕಾರ್ಯಕರ್ತರು) ಒಳ ನುಗ್ಗಿ ದಾಂಧಲೆ ಮಾಡಿ ಗೂಂಡಾಗಿರಿ ಮಾಡುವುದಲ್ಲ. ಎಲ್ಲರೂ ಕಾನೂನು ಸುವ್ಯವಸ್ಥೆಯನ್ನು ಎಲ್ಲರು ಪಾಲಿಸಬೇಕು’ ಎಂದರು.


‘ತಪ್ಪಿತಸ್ಥರ ಮೇಲೆ ಕಟ್ಟುನಿಟ್ಟಾದ ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ದೇವರ ಹೆಸರು ಇಟ್ಟುಕೊಂಡು ಇಂತಹ ಕೃತ್ಯ ಮಾಡುವುದು ರಾಮನಿಗೆ ಅಗೌರವ. ಹಿಂದೂ ಸಂಘಟನೆಗಳು ಕೂಡಾ ಇದನ್ನು ಖಂಡಿಸಬೇಕು. ನೈತಿಕ ಪೊಲೀಸ್ ಗಿರಿ ಮಾಡಿ ಕಾನೂನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕ್ರಮವಹಿಸುತ್ತೇವೆ. ಈ ರೀತಿ ಮಾಡಿಕೊಂಡು ಹೋದರೆ ಮುಂದೆ ಮಂಗಳೂರಿನ ಅಭಿವೃದ್ಧಿಗೆ ಹಿನ್ನೆಡೆಯಾಗಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಆಗುತ್ತಿದೆ. ಕೆಲವು ಸಂಘಟನೆಗಳು ಗಲಾಟೆ ಮಾಡಿ ಗೊಂದಲ ಸೃಷ್ಠಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Join Whatsapp
Exit mobile version