ಹೊಸದಿಲ್ಲಿ:ಸಮಾಜವಾದಿ ಪಕ್ಷದ ಮುಖ್ಯಸ್ಥ,ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 2 ರಂದು ತೀವ್ರ ಅನಾರೋಗ್ಯದ ಕಾರಣ ಮುಲಾಯಂ ಸಿಂಗ್ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಮುಲಾಯಂ ಸಿಂಗ್ ಯಾದವ್ ಅವರು ನವೆಂಬರ್ 22, 1939 ರಂದು ಜನಿಸಿದರು. ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಮುಲಾಯಂ ಸಿಂಗ್ ಕೇಂದ್ರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 10 ಬಾರಿ ಶಾಸಕರಾಗಿ ಮತ್ತು 7 ಬಾರಿ ಲೋಕಸಭಾ ಸದಸ್ಯರಾಗಿ ಮುಲಾಯಂ ಸಿಂಗ್ ಯಾದವ್ ಆಯ್ಕೆಯಾಗಿದ್ದರು.