ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ವೀಣಾ ಕಾಶಪ್ಪನವರ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪುವ ಭೀತಿ ಎದುರಾದ ಬೆನ್ನಲ್ಲೆ, ವೀಣಾ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.
ಬುಧವಾರ ಏಕಾಏಕಿ ಕಾಂಗ್ರೆಸ್ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ.
ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ, ಕಳೆದ 2019ರ ಲೋಕಸಭೆ ಚುನಾವಣೆಯ ಅಭ್ಯರ್ಥಿಯೂ ಆಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ದಟ್ಟವಾಗಿವೆ. ವೀಣಾ ಬದಲು, ವಿಜಯಪುರ ಜಿಲ್ಲೆಯ ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ ಅವರಿಗೆ ಟಿಕೆಟ್ ಅಂತಿಮವಾಗಿದೆ ಎನ್ನಲಾಗಿದೆ. ಹೀಗಾಗಿ ತೀವ್ರ ಆಕ್ರೋಶಗೊಂಡಿರುವ ವೀಣಾ ಬೆಂಬಲಿಗರು, ಗೋ ಬ್ಯಾಕ್ ಸಂಯುಕ್ತಾ ಎಂಬ ಫಲಕ ಹಿಡಿದು ಪ್ರತಿಭಟನೆ ನಡೆಸಿದರು.