ಸನಾತನ ಧರ್ಮ ಹೇಳಿಕೆ: ಸಚಿವ ಉದಯನಿಧಿ ಸ್ಟಾಲಿನ್’ಗೆ ಜಾಮೀನು

Prasthutha|

ಬೆಂಗಳೂರು: ‘ಸನಾತನ ಧರ್ಮ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದನ್ನು ಬುಡಸಮೇತ ಕಿತ್ತು ಹಾಕಬೇಕು’ ಎಂಬ ತಮಿಳುನಾಡಿನ ಸಚಿವ ಉದಯನಿಧಿ ಹೇಳಿಕೆಯನ್ನು ಆಕ್ಷೇಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯನಿಧಿ ಸ್ಟಾಲಿನ್ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

- Advertisement -

ಈ ಸಂಬಂಧ ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಸಚಿವ ಉದಯ ನಿಧಿ ಸ್ಟಾಲಿನ್ ಅವರು ಮಂಗಳವಾರ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಮುಂದೆ ಖುದ್ದು ಹಾಜರಾದರು.


ಹಾಜರಾತಿಯನ್ನು ದಾಖಲಿಸಿಕೊಂಡ ನ್ಯಾಯಾಧೀಶರು, ₹5 ಸಾವಿರ ನಗದು ಹಾಗೂ ₹50 ಸಾವಿರ ಮೊತ್ತದ ಆರೋಪಿಯ ವೈಯಕ್ತಿಕ ಬಾಂಡ್ ಮೇರೆಗೆ ಜಾಮೀನು ನೀಡಿದರು. ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.

Join Whatsapp
Exit mobile version