“ನನ್ನ ಅಣ್ಣನ ಈ ಪರಿಸ್ಥಿತಿಗೆ ನವೀನ್ ಕಾರಣ”: ಸಂಚಾರಿ ವಿಜಯ್ ಸಹೋದರನಿಂದ ದೂರು ದಾಖಲು

Prasthutha: June 14, 2021

ಬೆಂಗಳೂರು: ಸಂಚಾರಿ ವಿಜಯ್ ಬೈಕ್ ಅಪಘಾತದಿಂದ ಈ ಪರಿಸ್ಥಿತಿಗೆ ತಲುಪಲು ಬೈಕ್ ಚಲಾಯಿಸುತ್ತಿದ್ದ ನವೀನ್ ಕಾರಣನಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಚಾರಿ ವಿಜಯ್ ಸಹೋದರ ಸಿದ್ದೇಶ್ ಜಯನಗರ ಸಂಚಾರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  
ನವೀನ್ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದಲೇ ಬೈಕ್ ಸ್ಕಿಡ್ ಆಗಿ ಅಪಘಾತವಾಗಿದೆ. ಆದ್ದರಿಂದ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದೇಶ್ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಜೆಪಿ ನಗರದಲ್ಲಿ ನಡೆದಿದ್ದ ಬೈಕ್ ಅಪಘಾತದ ಸಂದರ್ಭ ಸಂಚಾರಿ ವಿಜಯ್ ಸ್ನೇಹಿತ ನವೀನ್ ಬೈಕ್ ಓಡಿಸುತ್ತಿದ್ದರು ಎನ್ನಲಾಗಿದೆ. ಜೆಪಿ ನಗರದ 7ನೇ ಹಂತದಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕಿಡ್ ಆಗಿದ್ದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದ ಸಂಚಾರಿ ವಿಜಯ್ ಅವರಿಗೆ ತಲೆ ಹಾಗೂ ತೊಡೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದವು. ವಿಜಯ್ ಅವರ ಸ್ನೇಹಿತ ನವೀನ್ ಗೂ ಬೆನ್ನು ಮೂಳೆಗೆ ತೀವ್ರ ತರಹದ ಗಾಯಗಳಾಗಿವೆ ಎನ್ನಲಾಗಿದೆ.

ವಿಜಯ್ ಸಹೋದರ ಸಿದ್ದೇಶ್ ದೂರಿನನ್ವಯ ಜಯನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ