ಚಿಕ್ಕಮಗಳೂರು: ಅಭಿಮಾನಿಗಳ ಶೋಕ ಸಾಗರದ ನಡುವೆ ಮಣ್ಣಲ್ಲಿ ಮಣ್ಣಾದ ಸಂಚಾರಿ ವಿಜಯ್

Prasthutha: June 15, 2021

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ಸಾವನ್ನಪ್ಪಿದ ಸ್ಯಾಂಡಲ್ ವುಡ್ ಯುವ ನಟ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರವನ್ನ ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿರುವ ವಿಜಯ್ ಸ್ನೇಹಿತ ರಘು ಎಂಬವರ ತೋಟದಲ್ಲಿ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲಾಯಿತು.

ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಕುಪ್ಪೂರು ಯತೀಶ್ವರ ಶಿವಾಚಾರ್ಯ ಶ್ರೀ ಗಳ ಸಮ್ಮುಖದಲ್ಲಿ ವಿಜಯ್ ಸಹೋದರರು ಅಂತಿಮ ವಿಧಿ ವಿಧಾನ ನೆರವೇರಿಸಿದರು. ಇದಕ್ಕೂ ಮುನ್ನ ಇಂದು ಬೆಳಿಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಸಂದರ್ಭ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಧನಂಜಯ್ ಸಹಿತ ಹಲವು ಸ್ಯಾಂಡಲ್ ವುಡ್ ನಟರು ಆಗಮಿಸಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ವಿಜಯ್ ಹುಟ್ಟೂರು ಪಂಚನಹಳ್ಳಿಗೆ ತರಲಾಗಿ ಅಲ್ಲಿಯೂ ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದ ಹುಟ್ಟೂರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಅಂತಿಮ ವಿದಾಯ ಸಲ್ಲಿಸಿದರು.

ಸಂಚಾರಿ ವಿಜಯ್ ಅವರ ಕುಟುಂಬಿಕರ ಅಭಿಲಾಷೆಯಂತೆ ವಿಜಯ್ ಅವರ ಅಂಗಾಂಗಗಳನ್ನ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯುವಂತಾದರು.

ಕಳೆದ ಶನಿವಾರ ತಡರಾತ್ರಿ ಸಂಭವಿಸಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂಚಾರಿ ವಿಜಯ್, ಇಂದು ಬೆಳಗ್ಗಿನ ಜಾವ ಇಹಲೋಕದ ತನ್ನ ಪಯಣ ಮುಗಿಸಿದರು. ವಿಜಯ್ ಸಾವಿಗೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.  

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ