ನಟಿಗೆ ವಂಚನೆ ಪ್ರಕರಣ: ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕ ಹರ್ಷವರ್ಧನ್ ಬಂಧನ

Prasthutha|

ಬೆಂಗಳೂರು: ಸಹ ನಟಿಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಂ ನಿರ್ಮಾಪಕ ಹರ್ಷವರ್ಧನ್ ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

‘ಮಿಷನ್ 2023’ ಚಿತ್ರದ ನಾಯಕ ಹರ್ಷವರ್ಧನ್ ಅಲಿಯಾಸ್ ವಿಜಯ್ ಭಾರ್ಗವ್ ಎನ್ನುವರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಈ ಸಂಬಂಧ ಅವರನ್ನು ಬಂಧಿಸಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿನಿಮಾಗಳಲ್ಲಿ ಪಾತ್ರ ಮಾಡುತ್ತಿದ್ದ ನಟಿಯೊಬ್ಬರು ಇವರ ವಿರುದ್ಧ ದೂರು ನೀಡಿದ್ದರು. ಸುಮಾರು 2 ವರ್ಷಗಳಿಂದ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದರು.

- Advertisement -

ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ನಟಿಗೆ ಮೆಡಿಕಲ್ ಟೆಸ್ಟ್ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Join Whatsapp