ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ | FSL ಪರೀಕ್ಷೆಯಲ್ಲಿ ನಟಿ ರಾಗಿಣಿ, ಸಂಜನಾ ಡ್ರಗ್ ಸೇವನೆ ದೃಢ

Prasthutha|

ಬೆಂಗಳೂರು: ಕಳೆದ ವರ್ಷ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಸ್ಯಾಂಡಲ್ ವುಡ್ ನಟಿಮಣಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅವರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೊಸ ಟ್ವಿಸ್ಟ್ ದೊರೆತಿದ್ದು, ನಟಿಯರು ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ ಎಂಬ ಅಂಶ ಎಫ್ ಎಸ್ ಎಲ್ ವರದಿಯಿಂದ ತಿಳಿದುಬಂದಿದೆ.

ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್ ಸೇವಿಸಿರುವುದು ಎಫ್ಎಸ್ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಬರೊಬ್ಬರಿ 10 ತಿಂಗಳ ಬಳಿಕ ಈ ವರದಿ ಸಿಸಿಬಿ ಪೊಲೀಸ್ ಕೈ ಸೇರಿದೆ. ಹೈದರಾಬಾದ್ ಎಫ್ ಎಫ್ ಎಲ್ ಲ್ಯಾಬ್ ನಿಂದ ಬಂದ ವರದಿಯಲ್ಲಿ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ಅವರ ಸಹಚರರಾದ ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು FSL ಪರೀಕ್ಷೆಯಲ್ಲಿ ದೃಡಪಟ್ಟಿದೆ ಎನ್ನಲಾಗಿದೆ.

- Advertisement -

ಮೂಲಗಳ ಪ್ರಕಾರ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು 2020ರ ಅಕ್ಟೋಬರ್ನಲ್ಲಿ ಹೈದರಾಬಾದ್ನ FSLಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಈಗ ಸಿಸಿಬಿ ಪೊಲೀಸರ ಕೈಸೇರಿದೆ. ಸದರಿ ರಿಪೋರ್ಟ್ನಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿದ್ದರು ಎನ್ನುವುದು ದೃಢಪಟ್ಟಿದ್ದು, ಜತೆಗೆ ವಿರೇನ್ ಖನ್ನಾ ಕೂಡ ಡ್ರಗ್ಸ್ ಸೇವಿಸಿರುವುದು ಖಚಿತವಾಗಿದೆ.

ಏನಿದು ಪ್ರಕರಣ! :

2020 ರ ಸೆಪ್ಟೆಂಬರ್ 14ನೇ ತಾರೀಖಿನಂದು ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದರು. 140 ದಿನಗಳ ಕಾಲ ಕಸ್ಟಡಿಯಲ್ಲಿದ್ದ ಅವರಿಗೆ, 2021ರ ಜನವರಿ 21ರಂದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಜನವರಿ 25ರಂದು ಅವರು ಜೈಲಿಂದ ಬಿಡುಗಡೆಯಾಗಿದ್ದರು. 2020ರ ಸೆಪ್ಟೆಂಬರ್ 16ರಂದು ಜೈಲು ಸೇರಿದ್ದ ಸಂಜನಾ ಗಲ್ರಾನಿ ಡಿಸೆಂಬರ್ 11 2020ರಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. 56 ದಿನಗಳ ಕಾಲ ಜೈಲಿನಲ್ಲಿ ಇದ್ದ ಸಂಜನಾ ಗಲ್ರಾನಿ, ಗಂಭೀರ ಅನಾರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಷರತ್ತುಬದ್ದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

- Advertisement -