ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ಸಂಘಪರಿವಾರದ ಕಾರ್ಯಕರ್ತನ ಬಂಧನ

Prasthutha|

ದಾವಣಗೆರೆ: ಕಳೆದ ಎರಡು ವರ್ಷಗಳಿಂದ ಸಾಹಿತಿಗಳಿಗೆ ಕೊಲೆ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸಿಸಿಬಿ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

- Advertisement -

ಪತ್ರ ಬರೆಯುತ್ತಿದ್ದ ಸಂಘಪರಿವಾರದ ಕಾರ್ಯಕರ್ತ ಶಿವಾಜಿ ರಾವ್ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಯು ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂಬಾರ ವೀರಭದ್ರಪ್ಪ (ಕುಂವೀ)ಬಿ.ಟಿ. ಲಲಿತಾ ನಾಯಕ್, ವೇಣು, ವಸುಂಧರಾ ಭೂಪತಿ ಸೇರಿ ಹಲವರಿಗೆ ಬೆದರಿಕೆ ಪತ್ರಗಳನ್ನು ಬರೆದಿದ್ದ. ಈ ಕುರಿತು ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೂರನ್ನೂ ಸಲ್ಲಿಸಿದ್ದರು.

Join Whatsapp