ಗೋಮಾಂಸ ಸಾಗಣೆ ಶಂಕೆ: ಮುಸ್ಲಿಮ್ ವ್ಯಕ್ತಿಯನ್ನು ಕೊಂದ ಸಂಘಪರಿವಾರದ ಕಾರ್ಯಕರ್ತರು

Prasthutha|

ಮುಂಬೈ: ಗೋಮಾಂಸವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಮೃತ ವ್ಯಕ್ತಿಯನ್ನು ಮುಂಬೈನ ಕುರ್ಲಾದ ಖುರೇಷಿ ನಗರದ ನಿವಾಸಿ ಅಫಾನ್ ಅಬ್ದುಲ್ ಮಜಿದ್ ಅನ್ಸಾರಿ ಎಂದು ಗುರುತಿಸಲಾಗಿದೆ.


ಅನ್ಸಾರಿ ಮತ್ತು ಆತನ ಸ್ನೇಹಿತ ನಾಸಿರ್ ಹುಸೇನ್ ಶೇಖ್ ಅಹ್ಮದ್ ನಗರದಿಂದ ಮುಂಬೈಗೆ ಕಾರಿನಲ್ಲಿ 450 ಕೆಜಿ ಮಾಂಸವನ್ನು ಸಾಗಿಸುತ್ತಿದ್ದರು. ಈ ವೇಳೆ ಗೋರಕ್ಷಕರು ಅವರನ್ನು ಅಡ್ಡಗಟ್ಟಿ ಥಳಿಸಿದ್ದಾರೆ.

- Advertisement -


ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಫಾನ್ ಅಬ್ದುಲ್ ಮಜಿದ್ ಅನ್ಸಾರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಹತ್ತು ಜನರನ್ನು ಬಂಧಿಸಲಾಗಿದೆ. ಗಾಯಾಳು ನೀಡಿದ ದೂರಿನ ಮೇರೆಗೆ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸಂತ್ರಸ್ತರು ನಿಜವಾಗಿಯೂ ಗೋಮಾಂಸ ಸಾಗಿಸುತ್ತಿದ್ದಾರೋ ಇಲ್ಲವೋ ಎಂಬುದು ಪ್ರಯೋಗಾಲಯದ ವರದಿ ಬಂದ ನಂತರವಷ್ಟೇ ತಿಳಿಯಲಿದೆ” ಎಂದು ಪೊಲೀಸರು ಹೇಳಿದ್ದಾರೆ.