ಮಂಗಳೂರು| ರಾಮಮಂದಿರ ಬಗ್ಗೆ ಅವಹೇಳನ ಆರೋಪ: ಜೆರೋಸಾ ಶಾಲೆಗೆ ಸಂಘಪರಿವಾರದ ಕಾರ್ಯಕರ್ತರಿಂದ ಮುತ್ತಿಗೆ

Prasthutha|

ಮಂಗಳೂರು: ರಾಮಮಂದಿರದ ಬಗ್ಗೆ ಶಿಕ್ಷಕಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ.

- Advertisement -


ವೈರಲ್ ಆಡಿಯೋ ಸಂದೇಶದ ಮೇರೆಗೆ ಕೆಲವು ವಿದ್ಯಾರ್ಥಿಗಳ ಪೋಷಕರು ಹಾಗೂ ಸಂಘಪರಿವಾರದ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ್ದಾರೆ.


ಶಾಲಾ ಶಿಕ್ಷಕಿಯೊಬ್ಬರು ಅಯೋಧ್ಯೆ ಮತ್ತು ರಾಮನ ಕುರಿತು ಅವಹೇಳನ ಮಾಡಿದ್ದು, ಮುತ್ತಿಗೆ ಹಾಕುವಂತೆ ಸೂಚಿಸುವ ಪೋಷಕರೊಬ್ಬರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಮಧ್ಯಾಹ್ನ 2 ಗಂಟೆಗೆ ಶಾಲಾ ಆವರಣದಲ್ಲಿ ಸೇರಬೇಕಾಗಿ ಸಂದೇಶ ರವಾನಿಸಲಾಗಿದ್ದು, ಆಡಿಯೋ ಹಾಗೂ ಸಂದೇಶ ವೈರಲ್ ಹಿನ್ನೆಲೆ ಶಾಲೆಗೆ ಪೊಲೀಸ್ ಭದ್ರತೆ ನೀಡಲಾಗಿತ್ತು.
ಅದರಂತೆ, ಶಾಲಾ ಆವರಣದಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಳಿಕ ಶಾಲೆ ಬಂದ್ ಆಗಿದ್ದರೂ ಕೆಲ ಪೋಷಕರು, ಕಾರ್ಯಕರ್ತರು ಜಮಾಯಿಸಿದ್ದಾರೆ.



Join Whatsapp