Home ಟಾಪ್ ಸುದ್ದಿಗಳು ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಥಳಿಸಿದ ಸಂಘಪರಿವಾರದ ಕಾರ್ಯಕರ್ತರು: ಹೆದ್ದಾರಿ ತಡೆ

ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಥಳಿಸಿದ ಸಂಘಪರಿವಾರದ ಕಾರ್ಯಕರ್ತರು: ಹೆದ್ದಾರಿ ತಡೆ

ಹುಬ್ಬಳ್ಳಿ: ಸರ್ವ ಧರ್ಮ ಪ್ರಾರ್ಥನಾ ಮಂದಿರದಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿ ಸಂಘಪರಿವಾರದ ಕಾರ್ಯಕರ್ತರು ರಸ್ತೆ ತಡೆ ನಡೆಸಿದ ಪರಿಣಾಮ ಸಾವಿರಾರು ವಾಹನಗಳು ಗಂಟೆಗಟ್ಟಲೆ ಕಾಯಬೇಕಾಗಿ ಬಂದ ಘಟನೆ ಭಾನುವಾರ ನಡೆದಿದೆ.


ಹುಬ್ಬಳ್ಳಿಯ ಬೈರಿದೇವರಕೊಪ್ಪದ ಸರ್ವಧರ್ಮ ಪ್ರಾರ್ಥನಾ ಮಂದಿರದಲ್ಲಿ ಪ್ರಾರ್ಥನೆ ನಡೆಯುತ್ತಿತ್ತು. ಈ ವೇಳೆ ಏಕಾಏಕಿ ಮಂದಿರಕ್ಕೆ ನುಗ್ಗಿದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಪ್ರಾರ್ಥನೆ ನಿರತರಾಗಿದ್ದ ನವನಗರ ಸಮೀಪದ ಸುತಗಟ್ಟಿಯ ನಿವಾಸಿ ಸೋಮು ಅವರಾಧಿ ಎಂಬವರನ್ನು ಎಳೆದೊಯ್ದು ಹಲ್ಲೆ ನಡೆಸಿ ಠಾಣೆಗೆ ಕರೆದೊಯ್ದಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿ ಸೋಮು ಅವರನ್ನು ಬಿಟ್ಟು ಕಳಿಸಿದ್ದರು.

ಇದನ್ನು ವಿರೋಧಿಸಿ ಸಂಘ ಪರಿವಾರದ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ರಸ್ತೆ, ಬಿಆರ್ ಟಿಎಸ್ ಕಾರಿಡಾರ್ ಅನ್ನು ಬಂದ್ ಮಾಡಿದರು. ಇದರಿಂದ ಸಾವಿರಾರು ಪ್ರಯಾಣಿಕರು ಪರದಾಡುವಂತಾಯಿತು. ಪ್ರಯಾಣಿಕರು ಸಂಘಪರಿವಾರದ ಕಾರ್ಯಕರ್ತರಿಗೆ ಹಿಡಿಶಾಪ ಹಾಕುತ್ತಿದ್ದ ದೃಶ್ಯ ಕಂಡುಬಂತು.

Join Whatsapp
Exit mobile version