ಚೆನ್ನೈ: ಗಾಂಧೀ ಜಯಂತಿಯಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ರೂಟ್ ಮಾರ್ಚ್ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನಿರಾಕರಿಸಿದ್ದು, ಸಂಘಪರಿವಾರ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದೆ.
ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯೊಂದಿಗೆ RSS ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದು, ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಹಿಂದೆ ಗಾಂಧಿ ಜಯಂತಿಯಂದು (ಅಕ್ಟೋಬರ್ 2) ಆರ್ಎಸ್ಎಸ್ ರೂಟ್ ಮಾರ್ಚ್ ನಡೆಸಿದ ಸಂದರ್ಭದಲ್ಲಿ ಅದರ ವಿರುದ್ಧ ಹಲವು ಗುಂಪುಗಳು ನಡೆಸಿದ ಪ್ರತಿಭಟನೆಯಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರ ರೂಟ್ ಮಾರ್ಚ್ ಗೆ ಅನುಮತಿ ನಿರಾಕರಿಸಿದೆ.
ಜೊತೆಗೆ ಆಡಳಿತಾರೂಢ ಡಿಎಂಕೆಯ ಎಲ್ಲಾ ಮಿತ್ರ ಪಕ್ಷಗಳಾದ ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಗೆ ಅಕ್ಟೋಬರ್ 2 ರಂದು RSS ರೂಟ್ ಮಾರ್ಚ್ ವಿರುದ್ಧವಾಗಿ ಮಾನವ ಸರಪಳಿ ಪ್ರತಿಭಟನೆ ನಡೆಸುವುದಕ್ಕೂ ಸರ್ಕಾರ ಅನುಮತಿ ನಿರಾಕರಿಸಿದೆ.