ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಜಾನನ ಮಹಾಮಂಡಳಿ ಸಭೆಯ ವೇದಿಕೆಗೆ ಸಾವರ್ಕರ್ ಹೆಸರಿಟ್ಟ ಬೆನ್ನಲ್ಲೇ, ಸಂಘಪರಿವಾರದ ಕಾರ್ಯಕರ್ತರು ವಿಜಯಪುರ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದಾರೆ.
ಭಾನುವಾರ ತಡರಾತ್ರಿ ಕಾಂಗ್ರೆಸ್ ಕಚೇರಿಯ ಪ್ರವೇಶ ದ್ವಾರ, ಕಿಟಕಿ ಹಾಗೂ ಗೋಡೆ ಸೇರಿದಂತೆ ವಿವಿಧ ಕಡೆಗಳ ಸಾವರ್ಕರ್ ಫೋಟೋ ಅಂಟಿಸಿದ್ದಾರೆ. ವಿಷಯ ತಿಳಿಯುತ್ತಲೇ ಕಾಂಗ್ರೆಸ್ ಕಚೇರಿಗೆ ಆಗಮಿಸಿರುವ ಜಲನಗರ ಪೊಲೀಸರು, ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ.