ಮಡಿಕೇರಿ: ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಮುಂದಾದ ಸಂಘಪರಿವಾರದ ಮುಖಂಡರ ಬಂಧನ

Prasthutha|

ಮಡಿಕೇರಿ: ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಮುಂದಾದ ಹಿಂದುತ್ವ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಹಿಂದುತ್ವ ಸಂಘಟನೆ ನವೆಂಬರ್, 10 ರಂದು ಆಯೋಜಿಸಿರುವ ಜನಜಾಗೃತಿ ಸಭೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದರು.

- Advertisement -


ಆದರೆ ನಿಷೇಧಾಜ್ಞೆ ಉಲ್ಲಂಘಿಸಿ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಮುಂದಾಗುತ್ತಿದ್ದಂತೆ ಹಿಂದುತ್ವ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.


2015ರಲ್ಲಿ ಟಿಪ್ಪು ಜಯಂತಿ ದಿನದಂದು ಹಿಂದುತ್ವ ಸಂಘಟನೆಯ ಮುಖಂಡ ಕುಟ್ಟಪ್ಪ ಎಂಬವರು ಲಾಠಿ ಚಾರ್ಜ್ ವೇಳೆ ಓಡಿ ಹೋಗುವ ಸಂದರ್ಭ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಅವರ ಸ್ಮರಣಾರ್ಥ ವಿಶ್ವ ಹಿಂದೂ ಪರಿಷತ್ ಸೇರಿ ವಿವಿಧ ಸಂಘಟನೆಗಳು ಬುಧವಾರ ಜಾಗೃತಿ ಜಾಥಾ ನಡೆಸುವುದಾಗಿ ಹೇಳಿದ್ದವು. ಆದರೆ ಭದ್ರತೆಯ ದೃಷ್ಟಿಯಿಂದ ಪೊಲೀಸರು ಅನುಮತಿ ನಿರಾಕರಿಸಿ, 144 ಸೆಕ್ಷನ್ ಜಾರಿಗೊಳಿಸಿದ್ದರು. ಆದರೆ ಹಿಂದುತ್ವ ಸಂಘಟನೆಗಳು ಸೆಕ್ಷನ್ ಉಲ್ಲಂಘಿಸಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Join Whatsapp