ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಅವರ ವಿರುದ್ಧ ಟೆನಿಸ್ ತಾರೆ ಸಾನಿಯಾ ಮಿರ್ಝಾ ಅವರನ್ನು ಕಣಕ್ಕಿಳಿಸಲು ಚಿಂತಿಸುತ್ತಿದೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಸಾನಿಯಾ ಮಿರ್ಜಾ ಅವರನ್ನು ಹೈದರಾಬಾದ್ ನಿಂದ ಅಸಾದುದ್ದೀನ್ ಓವೈಸಿ ವಿರುದ್ಧ ಕಣಕ್ಕಿಳಿಸಲು ಪ್ಲಾನ್ ಮಾಡಿದೆ. ಇದಕ್ಕಾಗಿ ಸಾನಿಯಾ ಮಿರ್ಜಾ ಅವರನ್ನು ಒಪ್ಪಿಸಲು ಕಾಂಗ್ರೆಸ್ ನಾಯಕರು ಮನೆ ಬಾಗಿಲ ಕದ ತಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಸಾದುದ್ದೀನ್ ಓವೈಸಿ ಕಳೆದ ನಾಲ್ಕು ಚುನಾವಣೆಗಳಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿರುವ ಕಾರಣ ಹೈದರಾಬಾದ್ ನಿಂದ ಸ್ಪರ್ಧೆ ಕುತೂಹಲ ಮೂಡಿಸಲಿದೆ. ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಕೊನೆಯ ಬಾರಿಗೆ 1980ರಲ್ಲಿ ಜಯ ಗಳಿಸಿತ್ತು. ಆಗ ಕೆ ಎಸ್ ನಾರಾಯಣ್ ಸಂಸದರಾಗಿ ಆಯ್ಕೆಯಾಗಿದ್ದರು.