ಸಂಕ್ರಾಂತಿ ಒಳಗಡೆ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ: ಡಿ.ಕೆ.ಶಿವಕುಮಾರ್

Prasthutha|

- Advertisement -

ಬೆಂಗಳೂರು: ಸಂಕ್ರಾಂತಿ ಒಳಗಡೆ ಮೊದಲ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರಾಗಿದ್ದಾರೆ. ನಾನು ಹೊಸ ವರ್ಷದ ಶುಭಾಶಯ ಕೋರಲು ಬಂದಿದ್ದೇನೆ. ನಾವೆಲ್ಲ ಒಟ್ಟಿಗೆ ದುಡಿದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಜನ ಬದಲಾವಣೆ ಬಯಸುತ್ತಿದ್ದಾರೆ. ಅದರಂತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಅಭ್ಯರ್ಥಿಗಳ ಪಟ್ಟಿ ಕಳಿಸಲು ಗಡುವು ಕೊಟ್ಟಿದ್ದೆವು ಎಂದರು.

Join Whatsapp