Home ಟಾಪ್ ಸುದ್ದಿಗಳು ಉಡುಪಿ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಸಂತೋಷ್ ಪಾಟೀಲ್ ಕುಟುಂಬಸ್ಥರು

ಉಡುಪಿ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಸಂತೋಷ್ ಪಾಟೀಲ್ ಕುಟುಂಬಸ್ಥರು

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸಿ ಉಡುಪಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಮೂಲಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂತೋಷ್ ಪಾಟೀಲ ಕುಟುಂಬಸ್ಥರು ತಕರಾರು ಅರ್ಜಿ ಸಲ್ಲಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಸಂತೋಷ್ ಸಹೋದರ ಪ್ರಶಾಂತ್, ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಾಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ‌. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

Join Whatsapp
Exit mobile version