Home ಟಾಪ್ ಸುದ್ದಿಗಳು ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂತೋಷ್ ರಾವ್ ಖುಲಾಸೆ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂತೋಷ್ ರಾವ್ ಖುಲಾಸೆ

ಬೆಂಗಳೂರು: ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ಇಂದು(ಜೂನ್ 16) ತೀರ್ಪು ನೀಡಿದೆ.


ಸಾಕ್ಷ್ಯಾಧಾರಗಳ ಕೊರತೆ ಕಾರಣಕ್ಕೆ ಆರೋಪಿ ಸಂತೋಷ್ ರಾವ್ ನನ್ನು ನಿರ್ದೋಷಿ ಎಂದು ಬೆಂಗಳೂರು ಸಿಬಿಐ ಕೋರ್ಟ್ ನ್ಯಾಯಮೂರ್ತಿ ಸಿಬಿ ಸಂತೋಷ್ ಆದೇಶ ಹೊರಡಿಸಿದ್ದಾರೆ. ಬರೋಬ್ಬರಿ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದೆ.


ಅಕ್ಟೊಬರ್ 10 2012 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು, ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು, ಆದರೆ ಸ್ಥಳೀಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅತ್ಯಾಚಾರ ಪ್ರಕರಣವನ್ನು ಸಿಬಿಐ ಗೆ ವರ್ಗಾಯಿಸಲಾಯಿತು. ಕುಂದಾಪುರ ಮೂಲದ ಗುತ್ತಿಗೆ ಕಾರ್ಮಿಕ ಸಂತೋಷ್ ರಾವ್ ನನ್ನು ಪೊಲೀಸರು ಬಂಧಿಸಿದ್ದರು.

Join Whatsapp
Exit mobile version